ಕರ್ನಾಟಕ

karnataka

By

Published : Aug 3, 2021, 3:27 PM IST

ETV Bharat / bharat

ದೇಶದ 24 ವಿಶ್ವವಿದ್ಯಾಲಯಗಳು FAKE​... ಯುಪಿಯಲ್ಲಿ ಅತಿ ಹೆಚ್ಚು, ಕರ್ನಾಟಕದಲ್ಲಿ ಎಷ್ಟು?

ವಿಶ್ವವಿದ್ಯಾಲಯ ಅನುದಾಯ ಆಯೋಗ(ಯುಜಿಸಿ) ಘೋಷಣೆ ಮಾಡಿರುವ ಪ್ರಕಾರ ದೇಶದ 24 ವಿಶ್ವವಿದ್ಯಾಲಯಗಳು ನಕಲಿ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

24 universities declared fake by ugc
24 universities declared fake by ugc

ನವದೆಹಲಿ:ದೇಶದಲ್ಲಿ ಒಟ್ಟು 24 ವಿಶ್ವವಿದ್ಯಾಲಯಗಳು ನಕಲಿ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್​ ಮಾಹಿತಿ ನೀಡಿದ್ದು, ಕರ್ನಾಟಕದಲ್ಲೂ ಒಂದು ಯೂನಿವರ್ಸಿಟಿ ಫೇಕ್​ ಎಂದು ಅವರು ಲೋಕಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಒಂದು ವಿಶ್ವವಿದ್ಯಾಲಯ ಕೂಡ ನಕಲಿ ಎಂದು ಗೊತ್ತಾಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸಂಪೂರ್ಣವಾದ ಮಾಹಿತಿ ಹಂಚಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು 8 ವಿಶ್ವವಿದ್ಯಾಲಯಗಳು ನಕಲಿಯಾಗಿದ್ದು, ದೆಹಲಿಯಲ್ಲಿ ಏಳು, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ತಲಾ ಎರಡು ವಿಶ್ವವಿದ್ಯಾಲಯಗಳು ಫೇಕ್​ ಎಂದು ತಿಳಿದು ಬಂದಿದ್ದು, ಯುಜಿಸಿ ಕೂಡ ಇದರ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಎಂದು ಧರ್ಮೇಂದ್ರ ಪ್ರಧಾನ್​ ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆವೊಂದಕ್ಕೆ ಲಿಖಿತ ರೂಪದಲ್ಲಿ ಧರ್ಮೇಂದ್ರ ಪ್ರಧಾನ್​ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು, ಪೋಷಕರು, ಜನ ಸಾಮಾನ್ಯರು ಮೂಲಕ ನೀಡಿರುವ ದೂರುಗಳ ಆಧಾರದ ಮೇಲೆ 24 ವಿವಿ ನಕಲಿ ಎಂದು ಘೋಷಿಸಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ದಿನಕ್ಕೆ ವಿಶೇಷ ಅತಿಥಿಗಳಾಗಿ ಟೋಕಿಯೋ ಒಲಿಂಪಿಕ್ಸ್ ಭಾರತದ ಅಥ್ಲೀಟ್ಸ್​​ : ನಮೋ ಆಹ್ವಾನ

ಯಾವೆಲ್ಲ ವಿಶ್ವವಿದ್ಯಾಲಯಗಳು ನಕಲಿ

  • ಕರ್ನಾಟಕ: ಬಡಗನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಷನ್ ಸೊಸೈಟಿ
  • ವಾರಾಣಸಿ:ಸಂಸ್ಕೃತ ವಿಶ್ವವಿದ್ಯಾಲಯ; ಮಹಿಳಾ ಗ್ರಾಮ ವಿದ್ಯಾಪೀಠ
  • ಅಲಹಾಬಾದ್​:ಗಾಂಧಿ ಹಿಂದಿ ವಿದ್ಯಾಪೀಠ
  • ಅಲಹಾಬಾದ್​: ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ
  • ಕಾನ್ಪುರ್​: ನೇತಾಜಿ ಸುಭಾಷ್ ಚಂದ್ರ ಬೋಸ್ ಮುಕ್ತ ವಿಶ್ವವಿದ್ಯಾಲಯ
  • ಅಲಿಘರ್​:ಉತ್ತರ ಪ್ರದೇಶ ವಿಶ್ವವಿದ್ಯಾಲಯ
  • ಮಥುರಾ:ಮಹಾರಾಣಾ ಪ್ರತಾಪ್ ಶಿಕ್ಷಾ ನಿಕೇತನ ವಿಶ್ವವಿದ್ಯಾಲಯ
  • ಪ್ರತಾಪಘರ್ ಮತ್ತು ಇಂದ್ರಪ್ರಸ್ಥ ಶಿಕ್ಷಾ ಪರಿಷತ್
  • ದೆಹಲಿ: ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್
  • ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ ದೆಹಲಿ
  • ವೊಕೇಷನಲ್ ಯೂನಿವರ್ಸಿಟಿ ದೆಹಲಿ
  • ಎಡಿಆರ್ ಸೆಂಟ್ರಿಕ್ ಜುರಿಡಿಕಲ್ ವಿಶ್ವವಿದ್ಯಾಲಯ ದೆಹಲಿ
  • ಇಂಡಿಯನ್ ಇನ್ ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಎಂಜಿನಿಯರಿಂಗ್
  • ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್
  • ಆಧ್ಯಾತ್ಮಿಕ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ)
  • ಕೋಲ್ಕತ್ತಾ: ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್
  • ಕೋಲ್ಕತ್ತಾದ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರಿಸರ್ಚ್
  • ರೂರ್ಕೆಲಾ:ನವಭಾರತ್ ಶಿಕ್ಷಾ ಪರಿಷತ್
  • ಉತ್ತರ ಒಡಿಶಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ
  • ಉಳಿದಂತೆ ಮಹಾರಾಷ್ಟ್ರ, ಪುದುಚೇರಿ, ಕೇರಳ ಮತ್ತು ಮಹಾರಾಷ್ಟ್ರದಲ್ಲೂ ತಲಾ ಒಂದು ನಕಲಿ ವಿಶ್ವವಿದ್ಯಾಲಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ABOUT THE AUTHOR

...view details