ಮಧ್ಯಪ್ರದೇಶ:ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವ ವೈದ್ಯೆಯೊಬ್ಬರು ದೇಹಕ್ಕೆ ಶಂಕಾಸ್ಪದ ರಾಸಾಯನಿಕ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ವಾಲಿಯರ್ ಮೂಲದ ಸ್ನಾತಕೋತ್ತರ ಪದವಿ ಪಡೆದ ಆಕಾಂಕ್ಷಾ ಮಹೇಶ್ವರಿ ಮೃತ ವೈದ್ಯೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ಬರೆದ ಡೆಟ್ನೋಟ್ ಪತ್ತೆಯಾಗಿದ್ದು, 'ನಾನು ಅಷ್ಟೊಂದು ಒತ್ತಡವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ' ಎಂದು ಉಲ್ಲೇಖಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. 'ಈ ಕುರಿತು ಹಿರಿಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಆಸ್ಪತ್ರೆಯಲ್ಲಿರುವ ಇತರೆ ವೈದ್ಯರು ಮತ್ತು ಆಕಾಂಕ್ಷಾ ಸಹೋದ್ಯೋಗಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯಿಂದ ಆಕೆಯ ಸ್ನೇಹಿತರು ಮತ್ತು ಕುಟುಂಬಸ್ಥರು ಆಘಾತಗೊಳಗಾಗಿದ್ದಾರೆ. ಶವ ಪರೀಕ್ಷೆಯ ವರದಿ ಬರುವವರೆಗೂ ಪ್ರಕರಣದ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ವೈದ್ಯೆ ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣ; ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ವಶಕ್ಕೆ ಪಡೆದ ಪೊಲೀಸರು