ಕರ್ನಾಟಕ

karnataka

ETV Bharat / bharat

ಮೂರು ದಿನ ಮೋದಿ ವಿದೇಶ ಪ್ರವಾಸ.. 25 ಸಭೆಗಳಲ್ಲಿ ಭಾಗಿಯಾಗಲಿರುವ ಪ್ರಧಾನಿ

ಪ್ರಧಾನಿ ಮೋದಿ ಮೇ 2 ರಿಂದ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್‌ಗೆ ಮೂರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದು, ಮೊದಲು ಜರ್ಮನಿಗೆ ಪ್ರಯಾಣಿಸಿ, ನಂತರ ಡೆನ್ಮಾರ್ಕ್‌ಗೆ ಭೇಟಿ ನೀಡುತ್ತಾರೆ ಮತ್ತು ಮೇ 4 ರಂದು ವಾಪಸಾಗುವಾಗ ಪ್ಯಾರಿಸ್​ಗೆ ಭೇಟಿ ನೀಡಲಿದ್ದಾರೆ.

By

Published : Apr 30, 2022, 2:43 PM IST

25-engagements-including-meeting-with-8-world-leaders-in-pm-modis-trip-govt-sources
ಮೂರು ದಿನ ಮೋದಿ ಪ್ರವಾಸ : 25 ಸಭೆಗಳಲ್ಲಿ ಭಾಗಿ

ನವದೆಹಲಿ: ಈ ವರ್ಷದ ಮೊದಲ ವಿದೇಶ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳಲಿದ್ದು, ಅವರು ತಮ್ಮ ಮೂರು ದಿನಗಳ ಪ್ರವಾಸದಲ್ಲಿ 25 ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 65 ಗಂಟೆಗಳ ಕಾಲ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರವಾಸದಲ್ಲಿ ಅವರು ಏಳು ದೇಶಗಳ ಎಂಟು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಹೇಳಲಾಗ್ತಿದೆ. ಜೊತೆಗೆ 50 ಜಾಗತಿಕ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರವಾಸದ ಸಂದರ್ಭದಲ್ಲಿ ಅಲ್ಲಿನ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮೇ 2 ರಿಂದ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್‌ಗೆ ಮೂರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದು, ಮೊದಲು ಜರ್ಮನಿಗೆ ಪ್ರಯಾಣಿಸಿ, ನಂತರ ಡೆನ್ಮಾರ್ಕ್‌ಗೆ ಭೇಟಿ ನೀಡುತ್ತಾರೆ ಮತ್ತು ಮೇ 4 ರಂದು ವಾಪಸಾಗುವಾಗ ಪ್ಯಾರಿಸ್​ಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗ್ತಿದೆ. ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಡುವೆ ಮೋದಿ ಅವರ ಈ ಪ್ರವಾಸ ಮಹತ್ವ ಪಡೆದುಕೊಂಡಿದೆ.

ಓದಿ :ಜಾಕ್ವೆಲಿನ್ ಫರ್ನಾಂಡಿಸ್ ಅವರ 7 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ವಶ

ABOUT THE AUTHOR

...view details