ಲಖನೌ(ಉತ್ತರಪ್ರದೇಶ):48 ಗಂಟೆಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರಪ್ರದೇಶದಲ್ಲಿ ಭಾರಿ ನಷ್ಟ ಉಂಟಾಗಿದ್ದಲ್ಲದೆ, ವಿವಿಧೆಡೆ ಸಂಭವಿಸಿದ ಅವಘಢಡಗಳಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಮನೆ ಕುಸಿತ ಪ್ರಕರಣಗಳಲ್ಲಿ ಹೆಚ್ಚು ಸಾವು ಉಂಟಾಗಿವೆ ಎಂದು ವರದಿಯಾಗಿದೆ.
ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದ ಎಲ್ಲಾ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಕೂಡ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ:ಇನ್ನು, ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಬಂದ್ ಆಗಿದ್ದು, ಲಖನೌ, ನೋಯ್ಡಾ, ಗಾಜಿಯಾಬಾದ್, ಕಾನ್ಪುರ್, ರಾಂಪುರ ಮತ್ತು ಮೀರತ್‌ನಲ್ಲಿ ಶಾಲಾ- ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ.