ಅಹಮದಾಬಾದ್: ಗಾಂಧಿನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ-ಎ) ನ 40 ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯ 25 ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರಿಗೆ ಕೊರೊನಾ ಸೋಂಕು ತಗುಲಿದೆ.
ಮಾರ್ಚ್ 12 ರ ನಂತರ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಹೆಚ್ಚಾಗಿ ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದೆ. ಮೊದಲ ಐದು ಪ್ರಕರಣಗಳು ಮಾರ್ಚ್ 12-13ರಂದು ವರದಿಯಾಗಿವೆ ಎಂದು ಐಐಎಂ-ಎ ತಿಳಿಸಿದೆ.