ಕೇರಳ/ಕೊಚ್ಚಿ :ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ಮತ್ತು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಜಂಟಿ ಕಾರ್ಯಾಚರಣೆ ನಡೆಸಿ ಕೊಚ್ಚಿನ್ ಪೋರ್ಟ್ ಟ್ರಸ್ಟ್‌ನಲ್ಲಿ ಕಂಟೈನರ್‌ನಲ್ಲಿ ಬಚ್ಚಿಟ್ಟಿದ್ದ ಅಪಾರ ಪ್ರಮಾಣದ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ.
ರಾತ್ರಿ ವೇಳೆ ಬಂದರಿನಿಂದ ಹೊರಡುವ ಹಡಗಿನಲ್ಲಿ ಸುಮಾರು 2,500 ಕೆಜಿ ತೂಕದ ರಕ್ತ ಚಂದನವನ್ನ ದುಬೈಗೆ ಕಳ್ಳಸಾಗಣೆ ಮಾಡಲು ಪ್ರಯತ್ನಿಸಲಾಗುತ್ತಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿಆರ್‌ಐ ಮತ್ತು ಕಸ್ಟಮ್ಸ್ ಅಧಿಕಾರಿಗಳು ಕೋಟ್ಯಂತರ ರೂ. ಮೌಲ್ಯದ ಸ್ವತ್ತನ್ನ ವಶಪಡಿಸಿಕೊಂಡಿದ್ದಾರೆ.