ಭುವನೇಶ್ವರ್(ಒಡಿಶಾ):ಸರ್ಕಾರಕ್ಕೆ ಇಂಧನ ವೆಚ್ಚದ ನಕಲಿ ಬಿಲ್ಗಳನ್ನು ಸಲ್ಲಿಸಿದ ಆರೋಪದ ಮೇಲೆ ಮೂವರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಿರುವ ಘಟನೆ ಒಡಿಶಾದ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನೂ ಹಿರಿಯ ಅಧಿಕಾರಿಗಳು ಕೈಗೊಂಡಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಐದು ಹಂತಗಳಲ್ಲಿ ಪಂಚಾಯಿತಿ ಚುನಾವಣೆಗಳು ನಡೆದಿದ್ದವು. ಈ ಚುನಾವಣಾ ಕರ್ತವ್ಯಕ್ಕಾಗಿ ಬಾಡಿಗೆ ವಾಹನಗಳನ್ನು ಬಳಕೆ ಮಾಡಲಾಗಿತ್ತು. ಆದರೆ, ಸಂಬಲ್‌ಪುರ ಜಿಲ್ಲೆಯಲ್ಲಿ ವಾಹನ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಕಾನ್‌ಸ್ಟೇಬಲ್‌ಗಳು ವಾಹನಗಳು ಸಂಚರಿಸಿದ್ದಕ್ಕಿಂತ ಹೆಚ್ಚಿನ ಇಂಧನ ಬಿಲ್ಗಳನ್ನು ಲಗತ್ತಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು.