ನವದೆಹಲಿ :ಬಡವರಿಗಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಪಕ್ಕಾ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಿಳಿಸಿದ್ದಾರೆ. ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ ಎಂದಿದ್ದಾರೆ. ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ.
ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಗ್ರಾಮೀಣ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2.52 ಕೋಟಿ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇದಕ್ಕಾಗಿ 1.95 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ನಗರ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಇದುವರೆಗೆ 58 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ.