ಮುಂಬೈ (ಮಹಾರಾಷ್ಟ್ರ): ಪುಣೆ - ಮುಂಬೈ ರಾಷ್ಟ್ರೀಯ ಹೆದ್ದಾರಿಯ ಖೋಪೋಲಿ ಬಳಿ ಸರಣಿ ಅಪಘಾತ ಸಂಭವಿಸಿದೆ. ಏಳು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಣೆ - ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂವರು ಬಲಿ - ಮೂವರ ಸಾವು
ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಏಳು ಜನರ ಸ್ಥಿತಿ ಗಂಭೀರವಾಗಿದೆ.
ಸರಣಿ ಅಪಘಾತ
ಮುಂಜಾನೆ 5:30 ರ ಸುಮಾರಿಗೆ ಕೋಳಿ ಸಾಗಿಸುತ್ತಿದ್ದ ವಾಹನವು ವೇಗವಾಗಿ ಬಂದು ಒಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ವಾಹನವು ಮುಂದೆ ನಿಂತಿದ್ದ ಇತರ ಐದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಪಡೆಗಳು ಭೇಟಿ ನೀಡಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.