ಚಂಬಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಇಂದು ಬೆಳಗ್ಗೆ 10.20ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ. ಚಂಬಾದಿಂದ 75.88 ಕಿ.ಮೀ ದೂರ ಹಾಗೂ 5 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ.