ಅಯೋಧ್ಯಾ:ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದು, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಯೋಧ್ಯೆಯ ಲಖನೌ-ಗೋರಖ್‌ಪುರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ, ಶಾಲೆಗೆ ನಡೆದುಕೊಂಡು ತೆರಳುತ್ತಿದ್ದ ನಾಲ್ವರು ಬಾಲಕಿಯರು ಟ್ರಕ್ನಡಿ ಸಿಲುಕಿದ್ದಾರೆ. ಇವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಓರ್ವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.