ಕರ್ನಾಟಕ

karnataka

ETV Bharat / bharat

ಕಾರ್ಗಿಲ್​ನಲ್ಲಿ ನಿಗೂಢ ಸ್ಫೋಟ.. ಮೂವರು ಬಲಿ, ಎಂಟು ಜನಕ್ಕೆ ಗಾಯ - ಗಾಯಾಳುಗಳನ್ನು ದ್ರಾಸ್​ನ ಉಪವಿಭಾಗೀಯ ಆಸ್ಪತ್ರೆ

ಕಣಿವೆ ನಾಡಿನಲ್ಲಿ ಸ್ಫೋಟದ ಸದ್ದು ಕೇಳಿ ಬಂದಿದೆ. ನಿಗೂಢ ಸ್ಫೋಟಕ್ಕೆ ಮೂವರು ಬಲಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

3-killed-and-8-injured-in-mysterious-blast-in-kargil
ಮೂವರು ಬಲಿ, ಎಂಟು ಜನಕ್ಕೆ ಗಾಯ

By

Published : Aug 19, 2023, 9:20 AM IST

ಕಾರ್ಗಿಲ್, ಲಡಾಖ್ : ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ನ ಕಾರ್ಗಿಲ್​ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ನಡೆದ ನಿಗೂಢ ಸ್ಫೋಟದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಆಗಸ್ಟ್​ 18ರ ತಡರಾತ್ರಿ ದ್ರಾಸ್​ ಪಣ್ಣದ ಕಬಾಡಿ ನಲ್ಹಾದಲ್ಲಿ ಸಭವಿಸಿದ ಈ ಸ್ಫೋಟದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರು. ಉಳಿದ ಗಾಯಾಳುಗಳೊಂದಿಗೆ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಮೂಲಕ ಮೃತರ ಸಂಖ್ಯೆ ಮೂರಕ್ಕೆ ಏರಿದೆ ಎಂದು ಕಾರ್ಗಿಲ್ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ. ಗಾಯಾಳುಗಳನ್ನು ದ್ರಾಸ್​ನ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರದಂದು ಕಬಾಡಿ ನಲ್ಹಾದ ಸ್ಕ್ರ್ಯಾಪ್ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದಾಕ್ಷಣ ಸ್ಥಳಕ್ಕೆ ಪೊಲೀಸ್​ ಪಡೆ ದೌಡಾಯಿಸಿ ಪರಿಶೀಲನೆ ಕೈಗೊಂಡಿತ್ತು. ಸ್ಫೋಟದ ಸ್ವರೂಪ ಇನ್ನೂ ತಿಳಿದು ಬಂದಿಲ್ಲ. ಸ್ಫೋಟದಲ್ಲಿ ಗಾಯಗೊಂಡವರನ್ನು ದ್ರಾಸ್​ ಉಪ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಗಾಯಗೊಂಡ ವ್ಯಕ್ತಿಗಳನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಹೆಚ್ಚಿನ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ ಮತ್ತು ಸ್ಫೋಟದ ಸ್ವರೂಪವನ್ನು ತನಿಖೆ ಮಾಡಲಾಗುತ್ತಿದೆ ಎಂದು ಕಾರ್ಗಿಲ್ ಎಸ್ಎಸ್ಪಿ ಅನಾಯತ್ ಅಲಿ ಚೌಧರಿ ಹೇಳಿದ್ದಾರೆ. ಈ ಘಟನೆ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಓದಿ:ಮನೆ ಮಾಲೀಕನ ಅಂತ್ಯ ಸಂಸ್ಕಾರಕ್ಕೆ ತೆರಳಿದ್ದ ಮನೆ ಮಂದಿ.. ಗ್ಯಾಸ್​ ಸ್ಫೋಟಗೊಂಡು ಮನೆ, ಕೊಟ್ಟಿಗೆ ಸುಟ್ಟು ಕರಕಲು

ಪ್ರಧಾನಿ ಮೋದಿ ಹತ್ಯೆ ಬೆದರಿಕೆ ಸಂದೇಶ: ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸೇರಿದಂತೆ ದೇಶಾದ್ಯಂತ ಸರಣಿ ಬಾಂಬ್​ ಸ್ಫೋಟದ ಬೆದರಿಕೆ ಕರೆ, ಪತ್ರಗಳ ಸರಣಿ ಮುಂದುವರಿದಿದೆ. ಆಗಸ್ಟ್​ 9ರ ಬುಧವಾರ ಕೂಡ ಮತ್ತೊಂದು ಬೆದರಿಕೆ ಪತ್ರ ರವಾನಿಸಲಾಗಿದೆ. ವಿಶೇಷ ಎಂದರೆ ಅದು ವಿದೇಶದಿಂದ ಬಂದಿದೆ. ಅದರಲ್ಲಿ ಮೋದಿ ಹತ್ಯೆ ಮಾಡಿ, ವಿವಿಧೆಡೆ ಸ್ಫೋಟಕ್ಕೆ ಸಂಚು ರೂಪಿಸಿದ ಬಗ್ಗೆ ಮಾಹಿತಿ ನೀಡಲಾಗಿದೆ.

ಪುಣೆಯ ದೀನಾನಾಥ್ ಆಸ್ಪತ್ರೆಯ ವ್ಯಕ್ತಿಯೊಬ್ಬರಿಗೆ ಈ ಇಮೇಲ್​ ಬಂದಿದೆ. ತಕ್ಷಣವೇ ಅವರು ನಗರ ಪೊಲೀಸ್ ಪಡೆಯ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಮೋಖಿಮ್​ ಎಂಬ ಹೆಸರಿನಲ್ಲಿ ಈ ಬೆದರಿಕೆ ಇಮೇಲ್​ ಕಳುಹಿಸಲಾಗಿದೆ. ಅದು ಎಲ್ಲಿಂದ ಬಂತು ಎಂಬ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ABOUT THE AUTHOR

...view details