ಮುಂಬೈ:ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ರಣವೀರ್‌ನಲ್ಲಿ ಸ್ಫೋಟ ಸಂಭವಿಸಿರುವ ಪರಿಣಾಮ ಮೂವರು ನೌಕಾಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, 11 ಮಂದಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. ಇವರನ್ನೆಲ್ಲ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
INS ರಣವೀರ್‌ನಲ್ಲಿ ಸ್ಫೋಟ: ನೌಕಾಸೇನೆಯ ಮೂವರು ಸಿಬ್ಬಂದಿ ಸಾವು, 11 ಮಂದಿಗೆ ಗಾಯ - ಭಾರತೀಯ ನೌಕಾಪಡೆ ಐಎನ್‌ಎಸ್ ರಣವೀರ್
ಭಾರತೀಯ ನೌಕಾಪಡೆಯ ಹಡಗು ಐಎನ್‌ಎಸ್ ರಣವೀರ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಮುಂಬೈನ ನೇವಲ್ ಡಾಕ್ಯಾರ್ಡ್ನಲ್ಲಿ ಈ ಘಟನೆ ನಡೆದಿದೆ. ಐಎನ್‌ಎಸ್ ರಣವೀರ್ ನವೆಂಬರ್ 2021ರಿಂದ ಪೂರ್ವ ನೌಕಾ ಕಮಾಂಡ್ನಿಂದ ಕರಾವಳಿಯ ಕಾರ್ಯಾಚರಣೆಗೆ ನಿಯೋಜನೆಗೊಂಡಿತ್ತು. ಕೆಲವೇ ದಿನಗಳಲ್ಲಿ ಬೇಸ್ಪೋರ್ಟ್ಗೆ ಮರಳಬೇಕಿತ್ತು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.
ಯುದ್ಧನೌಕೆಯ ಆಂತರಿಕ ವಿಭಾಗದಲ್ಲಿ ಸ್ಪೋಟಗೊಂಡಿರುವ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ನೌಕೆಯಲ್ಲಿನ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ದೊಡ್ಡ ಅನಾಹುತ ತಪ್ಪಿದೆ ಎಂದು ರಕ್ಷಣಾ ಇಲಾಖೆ ಮಾಹಿತಿ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದಿದ್ದಾರೆ.