ಬಸ್ತಿ(ಉತ್ತರ ಪ್ರದೇಶ): ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕೇಂದ್ರೀಯ ಭದ್ರತಾ ಪಡೆಯ ಯೋಧರು ಸಾವನ್ನಪ್ಪಿ, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.
ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿಯ ಹೆದ್ದಾರಿಯಲ್ಲಿ ಎರಡು ವಾಹನಗಳು ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ, ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.