ನವದೆಹಲಿ/ಮಧ್ಯಪ್ರದೇಶ: ದೇಶದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಿಸಿದ್ದು, ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೂ ಹೆಚ್ಚಿನ ಪ್ರಮಾಣದಲ್ಲಿ ಅಂಟುತ್ತಿದೆ.
ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯ 35 ವೈದ್ಯರು ಹಾಗೂ 50 ಮಂದಿ ವೈದ್ಯಕೀಯ ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಏಪ್ರಿಲ್ 10 ರಿಂದ ತುರ್ತು ಸೇವೆಗಳು ನೀಡಲು ಹಾಗೂ ಶಸ್ತ್ರಚಿಕಿತ್ಸೆಗಳನ್ನು ಮಾತ್ರ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ.