ನವದೆಹಲಿ: ಕೇಂದ್ರ ಸರ್ಕಾರ ಮೊನ್ನೆಯಷ್ಟೇ ಘೋಷಣೆ ಮಾಡಿದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದ ಆರೋಪದಡಿ 35 ವಾಟ್ಸಾಪ್ ಗುಂಪುಗಳನ್ನು ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಘೋಷಣೆಯಾದಾಗಿನಿಂದ ದೇಶದ ವಿವಿಧ ಭಾಗಗಳಲ್ಲಿ ಯೋಜನೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಈ ಬೆಳವಣಿಗೆ ಕಂಡುಬಂದಿದೆ.
ಅಗ್ನಿಪಥ್ ಯೋಜನೆಯ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಸರ್ಕಾರವು 35 ವಾಟ್ಸಾಪ್ ಗ್ರೂಪ್ಗಳನ್ನು ನಿಷೇಧಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಈ ಗ್ರೂಪ್ ಬಗ್ಗೆ ಮಾಹಿತಿ ಅಥವಾ ಅವುಗಳ ನಿರ್ವಾಹಕರ ವಿರುದ್ಧ ಯಾವುದಾದರೂ ಕ್ರಮವನ್ನು ಜರುಗಿಸಲಾಗಿದೆಯೇ ಎಂಬ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.