ಕೊಟ್ಟಾಯಂ(ಕೇರಳ):35 ವರ್ಷದ ಮಾನಸಿಕ ಅಸ್ವಸ್ಥ ಮಗಳ ಮೇಲೆಯೇ ಕಾಮುಕ ತಂದೆಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾನಸಿಕ ಅಸ್ವಸ್ಥೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಇದರ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ದುಷ್ಕೃತ್ಯಕ್ಕೊಳಗಾಗಿರುವ ಯುವತಿ ಮಾತನಾಡಲು ಸಾಧ್ಯವಾಗದ ಕಾರಣ ಆಕೆಯ ಹೇಳಿಕೆ ದಾಖಲಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯನ್ನ ಈಗಾಗಲೇ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.