ಅಮರಾವತಿ: ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಮೋಟಾರು ಶೋ ರೂಂನಲ್ಲಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 36 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಮುಂಜಾನೆ ಪಾಲಕೊಂಡ ಪಟ್ಟಣದ ಮನಂ ಮೋಟಾರ್ಸ್‌ನಲ್ಲಿ ಈ ಘಟನೆ ನಡೆದಿದೆ. ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಶೋರೂಮ್‌ನಲ್ಲಿ ಇರಿಸಲಾಗಿದ್ದ, ಇ-ಬೈಕ್‌ಗಳು ಮತ್ತು ಬ್ಯಾಟರಿಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ತನಿಖೆಯ ನಂತರ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಔಷಧ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು
ಬೆಂಕಿ ಅವಘಡದಿಂದ ಸುಮಾರು 50 ಲಕ್ಷ ರೂ.ನಷ್ಟ ಸಂಭವಿಸಿದೆ ಎಂದು ಶೋರೂಂ ಆಡಳಿತ ಮಂಡಳಿ ತಿಳಿಸಿದೆ. ಕಳೆದ ತಿಂಗಳು ಹೈದರಾಬಾದ್‌ನ ಇ-ಬೈಕ್ ಶೋರೂಮ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಎಂಟು ಮಂದಿ ಮೃತಪಟ್ಟಿದ್ದರು. ಬಹುಮಹಡಿ ಕಟ್ಟಡದ ನೆಲಮಾಳಿಗೆಯಲ್ಲಿರುವ ಶೋರೂಮ್‌ನಿಂದ ಉಂಟಾದ ಬೆಂಕಿ ಮೇಲಿನ ಮಹಡಿಯಲ್ಲಿರುವ ಹೋಟೆಲ್‌ಗೆ ವ್ಯಾಪಿಸಿತ್ತು. ಹೀಗಾಗಿ ಎಂಟು ಜನ ಸಾವಿಗೀಡಾಗಿ, ಹೋಟೆಲ್‌ನಲ್ಲಿ ತಂಗಿದ್ದ ಒಂಬತ್ತು ಮಂದಿ ಗಾಯಗೊಂಡಿದ್ದರು.