ನವದೆಹಲಿ: ರಾಜಧಾನಿಯಲ್ಲಿ ಮತ್ತೆ ಕೊರೊನಾ ವೈರಸ್ ಆತಂಕ ಹೆಚ್ಚಾಗಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ 37 ವೈದ್ಯರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಇಬ್ಬರು ಹೋಂ ಐಸೋಲೇಷನ್ನಲ್ಲಿದ್ದಾರೆ. ಐವರು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೆಹಲಿಯ ಗಂಗಾ ರಾಮ್ ಆಸ್ಪತ್ರೆಯ 37 ವೈದ್ಯರಿಗೆ ಕೋವಿಡ್ ಸೋಂಕು - ವೈದ್ಯರಿಗೆ ಕೋವಿಡ್ ಪಾಸಿಟಿವ್
ಕಳೆದ ಕೆಲವು ವಾರಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳಲ್ಲಿ ಏರಿಕೆ ಕಂಡುಬದಿದೆ. ಇಲ್ಲಿನ ಸರ್ ಗಂಗಾರಾಮ್ ಆಸ್ಪತ್ರೆಯ ಅನೇಕ ವೈದ್ಯರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
COVID positive
ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 7,437 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಇವರ ಪೈಕಿ 24 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 11,157 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.