ಶ್ರೀನಗರ( ಜಮ್ಮು ಕಾಶ್ಮೀರ): ಶ್ರೀನಗರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರಗೊಂಡಿದೆ. ಬೀದಿ ನಾಯಿಗಳ ದಾಳಿಯಲ್ಲಿ 17 ಪ್ರವಾಸಿಗರು ಸೇರಿದಂತೆ 39 ಜನರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಶ್ರೀನಗರದ ದಾಲ್ಗೇಟ್ ಪ್ರದೇಶದಲ್ಲಿ ಬೀದಿ ನಾಯಿಗಳ ಹಿಂಡು ದಾಳಿ ಮಾಡಿದ್ದರಿಂದ 39 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳಲ್ಲಿ 17 ಪ್ರವಾಸಿಗರು ಮತ್ತು 22 ಸ್ಥಳೀಯರು ಸೇರಿದ್ದಾರೆ. ಎಲ್ಲ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಕವಾಲ್‌ಜೀತ್ ಸಿಂಗ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, 39 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಖಚಿತಪಡಿಸಿದ್ದಾರೆ.