ನವದೆಹಲಿ:ಕೋವಿಡ್ ಸೋಂಕಿತರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆಯ 'ಮೂರನೇ ಡೋಸ್' ಅಥವಾ 'ಮುಂಜಾಗ್ರತಾ ಡೋಸ್' ಅನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಲಸಿಕೆ ಪಡೆಯುವವರು ಜನವರಿ 8ರಿಂದ ಕೋವಿಡ್ ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಜನವರಿ 10ರಿಂದ ಮೂರನೇ ಡೋಸ್ ಅನ್ನು ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಸದ್ಯಕ್ಕೆ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್ಸ್ ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮೂರನೇ ಡೋಸ್ ಹಾಕಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.