ಕರ್ನಾಟಕ

karnataka

ETV Bharat / bharat

ಭೋಪಾಲ್​ನ ಮಕ್ಕಳ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ: 4 ಹಸುಗೂಸುಗಳು ದಾರುಣ ಸಾವು - ಕಮಲಾ ನೆಹರೂ ಆಸ್ಪತ್ರೆ ದುರಂತ

ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ಸಂಭವಿಸಿರಬಹುದು. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ನಾವು ಸ್ಥಳಕ್ಕೆ ಬಂದೆವು, ವಾರ್ಡ್‌ನ ಒಳಗೆ ಕತ್ತಲೆ ಆವರಿಸಿತ್ತು, ನಾವು ಮಕ್ಕಳನ್ನು ಪಕ್ಕದ ವಾರ್ಡ್‌ಗೆ ಸ್ಥಳಾಂತರಿಸಿದೆವು. ಆ ವಾರ್ಡ್​ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯಲ್ಲಿ 36 ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್​ ಸಾರಂಗ್​ ಮಾಹಿತಿ ನೀಡಿದ್ದಾರೆ.

4 children die in hospital fire in Bhopal
ಅಗ್ನಿ ದುರಂತ

By

Published : Nov 9, 2021, 5:49 AM IST

Updated : Nov 9, 2021, 8:40 AM IST

ಭೋಪಾಲ್: ಭೋಪಾಲ್​ನ ಕಮಲಾ ನೆಹರೂ ಮಕ್ಕಳ ಆಸ್ಪತ್ರೆಯ ವಿಶೇಷ ನವಜಾತ ಶಿಶು ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ ನಾಲ್ಕು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಮಧ್ಯಪ್ರದೇಶ ಸರ್ಕಾರ ಆದೇಶಿಸಿದೆ.

ಅಧಿಕಾರಿಯೊಬ್ಬರ ಪ್ರಕಾರ ಐಸಿಯು ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ಸಂಭವಿಸಿರಬಹುದು. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ನಾವು ಸ್ಥಳಕ್ಕೆ ಬಂದೆವು, ವಾರ್ಡ್‌ನ ಒಳಗೆ ಕತ್ತಲೆ ಆವರಿಸಿತ್ತು, ನಾವು ಮಕ್ಕಳನ್ನು ಪಕ್ಕದ ವಾರ್ಡ್‌ಗೆ ಸ್ಥಳಾಂತರಿಸಿದೆವು. ಆ ವಾರ್ಡ್​ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯಲ್ಲಿ 36 ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್​ ಸಾರಂಗ್​ ಮಾಹಿತಿ ನೀಡಿದ್ದಾರೆ.

ಭೋಪಾಲ್​ನ ಮಕ್ಕಳ ಆಸ್ಪತ್ರೆಯ ಐಸಿಯುನಲ್ಲಿ ಕಾಣಿಸಿಕೊಂಡ ಬೆಂಕಿ

ಈ ದುರಂತದಲ್ಲಿ ಮೃತಪಟ್ಟಿರುವ ನಾಲ್ಕು ಮಕ್ಕಳ ಪೋಷಕರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್​ ಘೋಷಿಸಿದ್ದಾರೆ ಎಂದು ಸಾರಂಗ್​ ತಿಳಿಸಿದ್ದಾರೆ.

ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 10 ವಾಹನಗಳೊಂದಿಗೆ ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿದೆವು ಎಂದು ಫತೇಘರ್​ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬರ್ ಖಾನ್ ಹೇಳಿದ್ದಾರೆ.

ಆಸ್ಪತ್ರೆಯ ಒಂದು ಕೋಣೆ ದಟ್ಟ ಹೊಗೆಯಿಂದ ಆವೃತಗೊಂಡಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದು, ಘಟನೆಗೆ ಶಾರ್ಟ್​ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

Last Updated : Nov 9, 2021, 8:40 AM IST

ABOUT THE AUTHOR

...view details