ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ನಿತ್ಯ ಅನೇಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಕೆಲವರು ಸಾವನ್ನಪ್ಪುವಂತಹ ಪ್ರಕರಣ ದಾಖಲಾಗುತ್ತಿವೆ.
ಮಹಾರಾಷ್ಟ್ರದ ಥಾಣೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ನಾಲ್ವರು ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಇದೀಗ ಜಿಲ್ಲಾಧಿಕಾರಿ ರಾಜೇಶ್ ನರ್ವೇಕರ್ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.