ನವದೆಹಲಿ :ದರೋಡೆಕೋರರನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಗುಂಡು ಹಾರಿಸಲು ಯತ್ನಿಸಿದ ಆರೋಪದಡಿ ದೆಹಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಈ ವೇಳೆ ಗಾಯಗೊಂಡಿದ್ದ ಒಬ್ಬನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಿನ್ನೆ ರಾತ್ರಿ 9ಗಂಟೆ ಸುಮಾರಿಗೆ ರೋಹಿಣಿ ಪ್ರದೇಶದಲ್ಲಿ ದೆಹಲಿ ಪೊಲೀಸರ ತಂಡ ದರೋಡೆಕೋರರನ್ನು ಬಂಧಿಸಲು ತೆರಳಿತ್ತು. ಈ ವೇಳೆ ಪೊಲೀಸರ ಮೇಲೆಯೇ ಫೈರಿಂಗ್ ಯತ್ನ ನಡೆದಿತ್ತು. ಪೊಲೀಸರು ಸಹ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು. ಬಂಧಿತರನ್ನು ಯಶ್ಪಾಲ್ ಮತ್ತು ಬಿಕಿ ಎಂದು ಗುರುತಿಸಲಾಗಿದೆ.