ನವದೆಹಲಿ:ದೇಶದಲ್ಲಿ 2014 ರಿಂದ 2021 ರವರೆಗೆ 4 ಕೋಟಿಗೂ ಹೆಚ್ಚು ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸಶಕ್ತರಾಗಿದ್ದರೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸೃಷ್ಟಿಸಲಾಗಿದ್ದ ನಕಲಿ ಪಡಿತರ ಚೀಟಿಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.
ಈ ಬಗ್ಗೆ ರಾಜ್ಯಸಭೆಗೆ ಲಿಖಿತ ಮಾಹಿತಿ ನೀಡಿದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ, ದೇಶದಲ್ಲಿ 2014 ರಿಂದ 2021 ರ 7 ವರ್ಷದ ಅವಧಿಯಲ್ಲಿ 4.28 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ತಾವು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು.