ಕರ್ನಾಟಕ

karnataka

ETV Bharat / bharat

ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ನಾಲ್ವರು ಸಾವು, ಹಲವರಿಗೆ ಗಾಯ - ಐಸಿಯುನ ಎಸಿ ಘಟಕದಿಂದ ಬೆಂಕಿ

ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

fire
fire

By

Published : Apr 10, 2021, 11:33 AM IST

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ಇನ್ನೂ ಕೆಲವರು ಗಾಯಗೊಂಡಿದ್ದಾರೆ.

ನಗರದ ವಾಡಿ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ರಾತ್ರಿ 8.10ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಬೆಂಕಿ ಆ ಮಹಡಿಗೆ ಮಾತ್ರ ಸೀಮಿತವಾಗಿದ್ದು, ಉಳಿದ ಕಡೆ ಹರಡಿಲ್ಲ ಎಂದು ನಾಗ್ಪುರ ಮಹಾನಗರ ಪಾಲಿಕೆಯ ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ಹೇಳಿದ್ದಾರೆ.

ಇನ್ನು ಬೆಂಕಿ ಕಾಣಿಸಿಕೊಂಡಾಗ ಎರಡನೇ ಮಹಡಿಯಲ್ಲಿ 10 ರೋಗಿಗಳು ಇದ್ದರು. ಆರು ರೋಗಿಗಳು ತಾವೇ ಹೊರಗೋಡಿ ಬಂದಿದ್ದರೆ ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ABOUT THE AUTHOR

...view details