ಕೋಲ್ಕತ್ತಾ: ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆ ಪ್ರದೇಶದಲ್ಲಿ ಸೋಮವಾರ ಸಂಜೆ ಬಹುಮಹಡಿ ಕಟ್ಟಡದ 13 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 9 ಸಿಬ್ಬಂದಿ ಮೃತಪಟ್ಟಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ಈಗಾಗಲೇ ಹಲವಾರು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿವೆ.
ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿ, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಒಬ್ಬರು ಪೊಲೀಸ್ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆಯ ನ್ಯೂ ಕೊಯಿಲಾಘಾಟ್ ಕಟ್ಟಡದಲ್ಲಿ ಈ ದುರಂತ ನಡೆದಿದೆ. ಈ ಕಟ್ಟಡವು ರೈಲ್ವೆ ಕಚೇರಿಗಳನ್ನು ಹೊಂದಿದೆ. ಕೋಲ್ಕತಾ ಮಾಜಿ ಮಹಾನಗರ ಪಾಲಿಕೆ (ಕೆಎಂಸಿ) ಮೇಯರ್ ಮತ್ತು ಮುಖ್ಯ ಆಡಳಿತಾಧಿಕಾರಿ ಫಿರ್ಹಾದ್ ಹಕೀಮ್ ಮತ್ತು ಪಶ್ಚಿಮ ಬಂಗಾಳದ ಅಗ್ನಿಶಾಮಕ ಸೇವೆಗಳ ಸಚಿವ ಸುಜಿತ್ ಬೋಸ್ ಈಗಾಗಲೇ ಸ್ಥಳಕ್ಕೆ ತಲುಪಿದ್ದಾರೆ.