ಕರ್ನಾಟಕ

karnataka

ETV Bharat / bharat

ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೋವಿಡ್​ ದೃಢ! - ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳಿಗೆ ಕೋವಿಡ್​ ದೃಢ

ರಾಜಧಾನಿ ದೆಹಲಿಯಲ್ಲಿ ಕೊರೊನಾ ವೇಗ ಆಘಾತಕಾರಿಯಾಗಿದೆ. ಸಂಸತ್ ಭವನದಲ್ಲಿ 400 ಉದ್ಯೋಗಿಗಳಿಗೆ ಕೋವಿಡ್ ಪಾಸಿಟಿವ್ ಬಂದ ಬೆಳವಣಿಗೆ ನಡುವೆ ಈಗ ಸುಪ್ರೀಂ ಕೋರ್ಟ್‌ನಲ್ಲಿ ಭಾನುವಾರವೂ ಕೊರೊನಾ ಭೀತಿ ಹೆಚ್ಚಾಗಿದ್ದು, ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳು ಮತ್ತು ಶೇಕಡಾ 5 ರಷ್ಟು ಉದ್ಯೋಗಿಗಳಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

4 judges of Supreme Court test positive for Covid
4 judges of Supreme Court test positive for Covid

By

Published : Jan 9, 2022, 8:51 PM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡುಬರುತ್ತಿದೆ. ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳು ಮತ್ತು ಸುಮಾರು 5 ಪ್ರತಿಶತ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್​ಗೆ ಬಂದಿದೆ.

ಸರ್ವೋಚ್ಚ ನ್ಯಾಯಾಲಯದ 32 ನ್ಯಾಯಮೂರ್ತಿಗಳ ಪೈಕಿ ನಾಲ್ವರು ನ್ಯಾಯಮೂರ್ತಿಗಳು ಮತ್ತು 3000 ಉದ್ಯೋಗಿಗಳಲ್ಲಿ 150 ಮಂದಿಗೆ ಕೊರೊನಾ ವಕ್ಕರಿಸಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಶನಿವಾರ ದೆಹಲಿಯಲ್ಲಿ ಕೊರೊನಾದಿಂದ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 20,181 ಹೊಸ ಪ್ರಕರಣಗಳು ವರದಿಯಾಗಿದ್ದವು. ಅದೇ ಸಮಯದಲ್ಲಿ ಸೋಂಕಿನ ಪ್ರಮಾಣವು 19.60 ಪ್ರತಿಶತಕ್ಕೆ ಏರಿದೆ.

For All Latest Updates

ABOUT THE AUTHOR

...view details