ಬೆತುಲ್(ಮಧ್ಯಪ್ರದೇಶ): ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ವಾಪಸ್ ಬರುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ಬೆತುಲ್ - ಇಂದೋರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ ಎಂದು ಚಿಚೋಲಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಜಯ್ ಸೋನಿ ತಿಳಿಸಿದ್ದಾರೆ.
ಇದನ್ನೂ ಓದಿರಿ:SBI ಬ್ಯಾಂಕ್ ಕಳ್ಳತನದ ವೇಳೆ ಸಿಬ್ಬಂದಿ ಸಾವು, ಮತ್ತೋರ್ವನಿಗೆ ಗಾಯ, 8 ಗಂಟೆಯಲ್ಲಿ ಪ್ರಕರಣ ಭೇದಿಸಿದ ಖಾಕಿ!
ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ಕಳೆದುಕೊಂಡಿರುವ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಆರು ಜನರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಗೆ ಸಾಗಿಸಿ ಕೆಲ ಗಂಟೆಗಳ ನಂತರ ಪ್ರಾಣ ಬಿಟ್ಟಿದ್ದಾನೆ. ಮೃತರನ್ನ ಬೆತುಲ್ದ ನಿವಾಸಿಗಳಾದ ರಾಜ್ಕುಮಾರ್ ಚಾಧೋಕರ್(38), ಅವರ ಪತ್ನಿ ಶೋಭಾ(35), ಅನಿಲ್ ಘೋಡ್ಕಿ(45), ನಿಶಾಂಶು ಘೋಡ್ಕಿ(23) ಎಂದು ಗುರುತಿಸಲಾಗಿದೆ.