ಕರ್ನಾಟಕ

karnataka

ETV Bharat / bharat

ಒಡಿಶಾದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ: ಕನಿಷ್ಠ ನಾಲ್ವರು ಸಾವು, ಹಲವರಿಗೆ ಗಾಯ - road accident in phulbani

ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿರುವ ಘಟನೆ ಫುಲ್ಬಾನಿ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಲಹಬಾದಿಯಲ್ಲಿ ನಡೆದಿದೆ. ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ಇವರು ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

4 Killed, 4 Injured In A Tragic Accident In Odisha's Phulbani
ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ : ಕನಿಷ್ಟ ನಾಲ್ವರು ಸಾವು, ಗಾಯಾಳುಗಳು ಆಸ್ಪತ್ರೆಗೆ

By

Published : Feb 13, 2022, 11:11 AM IST

ಕಂಧಮಾಲ(ಒಡಿಶಾ): ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿರುವ ಘಟನೆ ಫುಲ್ಬಾನಿ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಲಹಬಾದಿಯಲ್ಲಿ ನಡೆದಿದೆ. ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಕಾರಿನಲ್ಲಿದ್ದ ಪ್ರಯಾಣಿಕರು ಬಿಸಿಪಡದ ತಲಪಡವಿಗೆ ಗುಮ್ಮಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ಈ ವೇಳೆ ಪ್ರಯಾಣಿಸುತ್ತಿದ್ದ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ಬೆರ್ಹಾಂಪುರ ಎಂಕೆಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ :ಕೋರ್ಟ್‌ ಆವರಣದಲ್ಲಿ ದುರ್ವರ್ತನೆ ಆರೋಪ: ವಕೀಲ ಜಗದೀಶ್‌ ಬಂಧನ

ABOUT THE AUTHOR

...view details