ಕರ್ನಾಟಕ

karnataka

ETV Bharat / bharat

ದಟ್ಟ ಮಂಜಿನಿಂದ ಅವಾಂತರ.. ಮರಕ್ಕೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ - ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ

ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ನಡೆದಿದೆ.

Car Rams Into Tree  Car Rams Into Tree in Odish  Saheed Laxman Nayak Medical College and Hospital  Car accident in Odisha  ದಟ್ಟ ಮಂಜಿನಿಂದ ಅವಾಂತರ  ಮರಕ್ಕೆ ಕಾರು ಡಿಕ್ಕಿ  ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತ  ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ  ಓರ್ವನ ಸ್ಥಿತಿ ಚಿಂತಾಜನಕ
ದಟ್ಟ ಮಂಜಿನಿಂದ ಅವಾಂತರ

By

Published : Dec 3, 2022, 10:13 AM IST

ನಬರಂಗಪುರ(ಒಡಿಶಾ):ಜಿಲ್ಲೆಯ ದಾಬುಗಾಂವ್ ಪೊಲೀಸ್ ವ್ಯಾಪ್ತಿಯ ಸರಗುಡದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಎಂಡಿ ಸದಾಂ, ರಬಿನ್ ಹಿಲಾ ಮತ್ತು ಸಬನ್ ಹಿಲಾಲ್ ಎಂದು ಗುರುತಿಸಲಾದ 3 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಎಂಡಿ ಅನ್ಸಾರ್ ಕೋರಾಪುಟ್‌ನ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಮರ್‌ಕೋಟೆಯಿಂದ ನಬರಂಗಪುರಕ್ಕೆ ಹಿಂತಿರುಗುತ್ತಿದ್ದ ವೇಳೆ ದಟ್ಟ ಮಂಜಿನಿಂದಾಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕಿದರು. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಅನುಸರಿಸಿದ್ದಾರೆ.

ಓದಿ:ಲಾರಿ-ಕಂಟೈನರ್​ ಮಧ್ಯೆ ಭೀಕರ ರಸ್ತೆ ಅಪಘಾತ.. ಚಾಲಕರು ಸೇರಿ ನಾಲ್ವರು ಸಜೀವ ದಹನ

ABOUT THE AUTHOR

...view details