ಮ್ಯಾಂಡಲೆ (ಮ್ಯಾನ್ಮಾರ್): ಮ್ಯಾನ್ಮಾರ್‌ನಲ್ಲಿ ಭದ್ರತಾ ಪಡೆಗಳು ಮತ್ತೆ ಪ್ರತಿಭಟನಕಾರರ ಮೇಲೆ ಗುಂಡು ಹಾರಿಸಿದ ಪರಿಣಾಮ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.
ಮ್ಯಾನ್ಮಾರ್‌ನಲ್ಲಿ ಹರಿದ ನೆತ್ತರು: ನಾಲ್ವರು ಪ್ರತಿಭಟನಕಾರರನ್ನು ಗುಂಡಿಕ್ಕಿ ಕೊಂದ ಭದ್ರತಾ ಪಡೆ
ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಸರ್ಕಾರವನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡವರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಹತ್ಯೆಗೈದಿವೆ.
ಮ್ಯಾನ್ಮಾರ್‌ನ ಅತಿದೊಡ್ಡ ನಗರವಾದ ಯಾಂಗೊನ್‌ನಲ್ಲಿ ಶುಕ್ರವಾರ ರಾತ್ರಿ ಮೂವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂಬ ಮಾಹಿತಿ ಇದೆ. ಮಿಲಿಟರಿ ಸರ್ಕಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಭದ್ರತಾ ಪಡೆಗಳು ಗುಂಡಿನ ಸುರಿಮಳೆ ಹರಿಸಿವೆ. ಕರ್ಫ್ಯೂ ಜಾರಿಯಲ್ಲಿದ್ದರೂ ಪ್ರತಿಭಟನಕಾರರು ತಮ್ಮ ಹೋರಾಟ ಕೈಬಿಟ್ಟಿಲ್ಲ.
ರಾತ್ರಿ ರಸ್ತೆಗಿಳಿದಿದ್ದ ಪ್ರತಿಭಟನಕಾರರು ಮಿಲಿಟರಿ ಸರ್ಕಾರ ವಿರುದ್ದ ಘೋಷಣೆ ಕೂಗುತ್ತಿದ್ದಾರೆ. ಈ ವೇಳೆ, ಪೊಲೀಸರು ಗಸ್ತು ತಿರುಗಿ ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನಕಾರರನ್ನು ಬೆದರಿಸಲು ಪ್ರಯತ್ನಿಸಿದ್ದರು. ಇದು ಸಫಲವಾಗದ ಹಿನ್ನೆಲೆ ಪ್ರತಿಭಟನಕಾರರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಮಾಹಿತಿ ಇದೆ. ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಹತ್ಯೆ ಮಾಡಿದ ಬಗ್ಗೆ ಮೈಟ್‌ಕೈನಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.