ಕರ್ನಾಟಕ

karnataka

ETV Bharat / bharat

ದರೋಡೆ ತಡೆಯಲು ಬಂದವರ ಮೇಲೆ ಗುಂಡಿನ ದಾಳಿ: ಒಂದೇ ಕುಟುಂಬದ ಮೂವರ ದಾರುಣ ಸಾವು - Cloth merchant killed

ಬಟ್ಟೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಿಂದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Four members of a family shot in Ghaziabad
ಗಾಝಿಯಾಬಾದ್ ಶೂಟ್ ಔಟ್

By

Published : Jun 28, 2021, 10:21 AM IST

ಗಾಝಿಯಾಬಾದ್:ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಿಚಿತರು ಒಂದೇ ಕುಟುಂಬದ ನಾಲ್ವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದೆಹಲಿ ಎನ್​​ಸಿಆರ್ ವ್ಯಾಪ್ತಿಯ ಲಿಯೋನ್ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

​ಸೋಮವಾರ ಮುಂಜಾನೆ 3 ಗಂಟೆಯ ಸುಮಾರಿಗೆ ರಿಹಾಸುದ್ದೀನ್ ಎಂಬ ಬಟ್ಟೆ ವ್ಯಾಪಾರಿಯ ಮನೆಯ ಟೆರೆಸ್ ಮೇಲಿನಿಂದ ನುಗ್ಗಿದ ಅಪರಿಚಿತರ ಗುಂಪು ದರೋಡೆಗೆ ಯತ್ನಿಸಿತ್ತು. ಇದನ್ನು ತಡೆಯಲು ಹೋದಾಗ ರಿಹಾಸುದ್ದೀನ್, ಅವರ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಇದನ್ನೂಓದಿ: ಸ್ನಾನಕ್ಕೆ ತೆರಳಿದ್ದ ನಾಲ್ವರು 10ನೇ ತರಗತಿ ವಿದ್ಯಾರ್ಥಿಗಳು ನೀರುಪಾಲು

ದಾಳಿಯಿಂದ ರಿಹಾಸುದ್ದೀನ್ ಮತ್ತು ಅವರ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಗಂಭೀರವಾಗಿ ಗಾಯಗೊಂಡಿದ್ದ ಅವರ ಪತ್ನಿಯನ್ನು ನೋಯ್ಡಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

ಗುಂಡಿನ ದಾಳಿಯ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ಪಡೆದರು. ವಿಧಿ ವಿಜ್ಞಾನ ತಜ್ಞರು ಮತ್ತು ಶ್ವಾನದಳ ಕೂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ. ತನಿಖೆ ಮುಂದುವರೆದಿದೆ.

ABOUT THE AUTHOR

...view details