ಇಂದೋರ್:ನಗರದ ಮಹಿಳೆಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ವಿಚಿತ್ರ ಏನಪ್ಪಾ ಅಂದ್ರೆ, ಈ ಮಹಿಳೆ ಈಗಾಗಲೇ ವಿವಿಧ ದೇಶಗಳಲ್ಲಿ ನಾಲ್ಕು ಬಾರಿ ಲಸಿಕೆ ತೆಗೆದುಕೊಂಡಿದ್ದರು. ಈ ಬಗ್ಗೆ ಇಂದೋರ್ ಸಿಎಂಎಚ್‌ಒ ಡಾ. ಭೂರೆ ಸಿಂಗ್ ಸೆಟಿಯಾ ಮಾಹಿತಿ ನೀಡಿದ್ದಾರೆ.
ವಿವಿಧ ದೇಶಗಳಲ್ಲಿ 4 ಬಾರಿ ಲಸಿಕೆ ಹಾಕಿಸಿಕೊಂಡ ಮಹಿಳೆಗೆ ಕೋವಿಡ್ ಸೋಂಕು! - ಮಧ್ಯಪ್ರದೇಶದಲ್ಲಿ ಲಸಿಕೆ ಹಾಕಿಕೊಂಡಿದ್ದ ಮಹಿಳೆಗೆ ಕೊರೊನಾ ದೃಢ
ಈಗಾಗಲೇ ನಾಲ್ಕು ಬಾರಿ ಲಸಿಕೆ ಹಾಕಿಸಿಕೊಂಡಿದ್ದ ಮಹಿಳೆಗೆ ಕೋವಿಡ್ ಸೋಂಕು ತಗುಲಿರುವ ಪ್ರಕರಣ ಮಧ್ಯಪ್ರದೇಶದ ಇಂದೋರ್ನಲ್ಲಿ ಬೆಳಕಿಗೆ ಬಂದಿದೆ.
ನಾಲ್ಕು ಬಾರಿ ಲಸಿಕೆ ಹಾಕಿಸಿಕೊಂಡ ಮಹಿಳೆಗೂ ಬಿಡದ ಕೊರೊನಾ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳೆಯ ಕೋವಿಡ್ ಮಾದರಿಯನ್ನು ವಿಮಾನ ನಿಲ್ದಾಣದಲ್ಲಿ ತೆಗೆದುಕೊಳ್ಳಲಾಗಿತ್ತು. ವೈದ್ಯಕೀಯ ತಪಾಸಣೆಯ ನಂತರ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಲ್ಲಿ ಯಾವುದೇ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದರು.
ಮೂವತ್ತು ವರ್ಷದ ಕೋವಿಡ್ ಸೋಂಕಿತ ಮಹಿಳೆ ನಾಲ್ಕು ಬಾರಿ ಲಸಿಕೆಯನ್ನು ಹೇಗೆ ತೆಗೆದುಕೊಂಡರು? ಎಂಬ ವಿವರಗಳು ಲಭ್ಯವಾಗಿಲ್ಲ. ಈಗಾಗಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ತಂಡ ನಿಗಾ ಇರಿಸಿದೆ ಎಂದು ವೈದ್ಯಾಧಿಕಾರಿ ತಿಳಿಸಿದರು.