ನವದೆಹಲಿ:ಈ ವರ್ಷ ನಾಲ್ಕು ಸಾವಿರಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು ಮೆಹ್ರಮ್ (ಪುರುಷರ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಂಡಿರುವುದು ಅತಿ ದೊಡ್ಡ ಪರಿವರ್ತನೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ತಮ್ಮ ಸರ್ಕಾರವು ಹಜ್ ನೀತಿಯಲ್ಲಿ ಮಾಡಿದ ಬದಲಾವಣೆಗಳಿಂದ ಹೆಚ್ಚು ಹೆಚ್ಚು ಜನರು ವಾರ್ಷಿಕ ಯಾತ್ರೆಗೆ ಹೋಗಲು ಅವಕಾಶವನ್ನು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ರೆಡಿಯೋದಲ್ಲಿ ಪ್ರಸಾರವಾದ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ, ಪುರುಷರ ನೆರವಿಲ್ಲದೆ (ಮೆಹ್ರಮ್) ಈ ವರ್ಷ ಹಜ್ ಯಾತ್ರೆ ಕೈಗೊಂಡ ಮುಸ್ಲಿಂ ಮಹಿಳೆಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಸ್ಲಿಂ ಮಹಿಳೆಯರ ಈ ಪ್ರಯಾಣವು ಹಲವು ವಿಧಗಳಲ್ಲಿ ಬಹಳ ವಿಶೇಷವಾಗಿದೆ. ಯಾವುದೇ ಪುರುಷ ಸಹಚರ ಅಥವಾ ಮೆಹ್ರಮ್ ಇಲ್ಲದೆ ಹಜ್ ಯಾತ್ರೆ ಮಾಡಿದ ಮಹಿಳೆಯರು ಮತ್ತು ಸಂಖ್ಯೆ 50 ಅಥವಾ 100 ಅಲ್ಲ. ಅದು 4,000ಕ್ಕಿಂತ ಹೆಚ್ಚು. ಇದೊಂದು ದೊಡ್ಡ ಪರಿವರ್ತನೆಯಾಗಿದೆ ಎಂದು ಬಣ್ಣಿಸಿದರು.
ಈ ಹಿಂದೆ ಮುಸ್ಲಿಂ ಮಹಿಳೆಯರಿಗೆ ಮೆಹ್ರಮ್ ಇಲ್ಲದೆ ಹಜ್ ಮಾಡಲು ಅವಕಾಶವಿರಲಿಲ್ಲ ಎಂದು ಪ್ರಧಾನಿ ಮೋದಿ, ಮನ್ ಕಿ ಬಾತ್ ಮೂಲಕ ನಾನು ಸೌದಿ ಅರೇಬಿಯಾ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. ಅಲ್ಲದೇ, ಮೆಹ್ರಮ್ ಇಲ್ಲದೆ ಹಜ್‌ಗೆ ತೆರಳುವ ಮಹಿಳೆಯರಿಗೆ ವಿಶೇಷವಾಗಿ ಮಹಿಳಾ ಸಂಯೋಜಕರನ್ನು ನೇಮಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಹಜ್ ನೀತಿಯಲ್ಲಿ ಮಾಡಲಾದ ಬದಲಾವಣೆಗಳು ಹೆಚ್ಚು ಮೆಚ್ಚುಗೆಯನ್ನೂ ಗಳಿಸಿವೆ ಎಂದು ತಿಳಿಸಿದರು.
ಇದನ್ನೂ ಓದಿ:Murli Manohar Joshi: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಭೇಟಿ ಮಾಡಿದ ಪ್ರಧಾನಿ ಮೋದಿ