ಭೋಪಾಲ್(ಮಧ್ಯಪ್ರದೇಶ): ಕೊರೊನಾ ವೈರಸ್ ಸಂದರ್ಭದಲ್ಲಿ ಎಲ್ಲವೂ ಬಂದ್ ಆಗಿತ್ತು. ವಾಹನ ಸಂಚಾರದ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿತ್ತು. ಆದರೆ ಈ ಸಂದರ್ಭದಲ್ಲೇ ಮಧ್ಯಪ್ರದೇಶದಲ್ಲಿ ಮಾನವ ಕಳ್ಳಸಾಗಣೆ ಬಲು ಜೋರಾಗಿ ನಡೆದಿರುವುದು ಬೆಳಕಿಗೆ ಬಂದಿದೆ. 2020ರ ಏಪ್ರಿಲ್ ತಿಂಗಳಿಂದ 2021ರ ಜೂನ್ ತಿಂಗಳಲ್ಲಿ ಒಟ್ಟು 4,169 ಮಕ್ಕಳ ಕಳ್ಳಸಾಗಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮಧ್ಯಪ್ರದೇಶದಲ್ಲಿ ಮಾನವ ಕಳ್ಳಸಾಗಣೆ ತಡೆಯಲು 'ಆಪರೇಷನ್ ಮುಸ್ಕಾನ್' ನಡೆಸಲಾಗುತ್ತಿದ್ದು, ಈ ಮೂಲಕ 1,249 ಮಕ್ಕಳ ರಕ್ಷಣೆ ಮಾಡಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಗಾಗಿ ಕೂಡ ಇಷ್ಟೊಂದು ಮಕ್ಕಳ ಕಳ್ಳಸಾಗಣೆ ಮಾಡಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ಕೇವಲ ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯದಿಂದ 1,574 ಮಕ್ಕಳು ನಾಪತ್ತೆಯಾಗಿದ್ದಾರೆ. ಜೂನ್ ತಿಂಗಳಲ್ಲಿ 912 ಬಾಲಕಿಯರು ಸೇರಿ 1,068 ಮಕ್ಕಳು ನಾಪತ್ತೆಯಾಗಿದ್ದಾರೆ.