ನವದೆಹಲಿ: ಕಳೆದ 24 ಗಂಟೆಗಳಲ್ಲಿ 44,059 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 91,39,866ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 44,059 ಮಂದಿಗೆ ಸೋಂಕು - COVID NEWS
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖದತ್ತ ಸಾಗುತ್ತಿದೆ. ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ ಯಥಾಸ್ಥಿತಿಯಲ್ಲಿ ಸಾಗುತ್ತಿದೆ. ಕಳೆದ 24 ಗಂಟೆಯಲ್ಲಿ 44,059 ಮಂದಿ ಸೋಂಕಿಗೆ ಒಳಗಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮತ್ತು ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,059 ಮಂದಿಗೆ ಸೋಂಕು
ನಿನ್ನೆ 511 ಮಂದಿ ಕೊರೊನಾದಿಂದ ಕೊನೆಯುಸಿರೆಳೆದಿದ್ದು, ಈವರೆಗೆ ಒಟ್ಟು 1,33,227 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 41,024 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 85,62,642 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಭಾನುವಾರ 8,49,596 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈವರೆಗೆ 13,25,82,730 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಮತ್ತು ಸಂಶೋಧನಾ ಮಂಡಳಿ(ಐಸಿಎಂಆರ್) ಮಾಹಿತಿ ನೀಡಿದೆ.