ನವದೆಹಲಿ:ಭಾರತದಲ್ಲಿ ಇಂದು ಹೊಸದಾಗಿ 44,111 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 57,477 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 738 ಮಂದಿ ಸೋಂಕಿತರು ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಹೊಸ 44,111 ಕೋವಿಡ್ ಪ್ರಕರಣಗಳು ಪತ್ತೆ: 738 ಮಂದಿ ಸಾವು
ಭಾರತದಲ್ಲಿ ಇಂದು ಹೊಸದಾಗಿ 44,111 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 738 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಕೋವಿಡ್ ಪ್ರಕರಣಗಳು ಪತ್ತೆ
ಭಾರತದಲ್ಲಿ ಇಲ್ಲಿಯವರೆಗೆ 3,05,02,362 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,96,05,779 ಮಂದಿ ಚೇತರಿಕೆ ಕಂಡಿದ್ದಾರೆ. ಇಲ್ಲಿ ತನಕ 4,01,050 ಮಂದಿ ಸೋಂಕಿತರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಒಟ್ಟು 4,95,533 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇದುವರೆಗೆ 34,46,11,291 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ.