ಪೂರ್ನಿಯಾ (ಬಿಹಾರ): ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಾಗೊಂಡಿರುವ ಘಟನೆ ಪುರ್ನಿಯಾದ ಮರಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬೈಪಾಸ್‌ನಲ್ಲಿ ನಡೆದಿದೆ. ಗಾಯಾಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮವಾಗಿ ಕಾರಿನಲ್ಲಿದ್ದ 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಪೂರ್ನಿಯಾ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅರಾರಿಯಾದ ಜೋಕಿಹಾಟ್‌ನಿಂದ ಖಗರಿಯಾ ಜಿಲ್ಲೆಗೆ ಮದುವೆ ದಿಬ್ಬಣದ ಕಾರು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅಪಘಾತದಿಂದ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮೃತರ ಸಂಬಂಧಿಕ ಅಬ್ದುಲ್ ಮಾತನಾಡಿ, "ಸ್ಕಾರ್ಪಿಯೋ ವಾಹನದ ಚಾಲಕನಿಗೆ ವಾಹನವನ್ನು ನಿಯಂತ್ರಿಸಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದಾರೆ'' ಎಂದು ತಿಳಿಸಿದರು.
ಘಟನೆ ಸಂಬಂಧ ಡಿಎಸ್ಪಿ ಪುಷ್ಕರ್ ಕುಮಾರ್ ಮಾತನಾಡಿ, "ರಸ್ತೆ ಅಪಘಾತದಲ್ಲಿ ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಲ್ಲಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಲಾಗುತ್ತದೆ ಎಂದರು.