ಹೈದರಾಬಾದ್:ತೆಲಂಗಾಣದ ವರಂಗಲ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಟ್ರೇಲರ್ ಉರುಳಿಬಿದ್ದಿರುವ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಮತ್ತೆ ಐವರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಟ್ರ್ಯಾಕ್ಟರ್ ಟ್ರೇಲರ್ನಲ್ಲಿ 10 ಜನರು ಪ್ರಯಾಣಿಸುತ್ತಿದ್ದ ವೇಳೆ ಸ್ಕಿಡ್ ಆಗಿ ಪಲ್ಟಿಯಾಗಿದೆ. ಪರಿಣಾಮ, ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಮತ್ತೆ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.