ಮಾಂಡ್ಲಾ(ಮಧ್ಯಪ್ರದೇಶ):ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮಾಂಡ್ಲಾದಲ್ಲಿ ನಡೆದಿದೆ.
ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ: ಐವರ ದುರ್ಮರಣ, 50 ಜನರಿಗೆ ಗಾಯ - ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ
ಅತಿ ವೇಗವಾಗಿ ತೆರಳುತ್ತಿದ್ದ ವಾಹನವೊಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರಣ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.
![ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ: ಐವರ ದುರ್ಮರಣ, 50 ಜನರಿಗೆ ಗಾಯ marriage party vehicle](https://etvbharatimages.akamaized.net/etvbharat/prod-images/768-512-11058991-thumbnail-3x2-wdfdfdfd.jpg)
marriage party vehicle
ಗಾಯಗೊಂಡಿರುವ 12 ಜನರು ನಾರಾಯಣಗಂಜ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ 34 ಮಂದಿ ಜಬಲ್ಪುರ ವೈದ್ಯಕೀಯ ಕಾಲೇಜ್ನಲ್ಲಿ ದಾಖಲು ಮಾಡಲಾಗಿದೆ.
ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ
ಲಭ್ಯವಾಗಿರುವ ಮಾಹಿತಿ ಪ್ರಕಾರ, ವಾಹನ ಹೆಚ್ಚಿನ ಜನರನ್ನು ಹೊತ್ತು ಸಾಗುತ್ತಿತ್ತು. ಹಾಗೂ ವೇಗದಲ್ಲಿದ್ದ ಕಾರಣ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.