ನವದೆಹಲಿ:ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ನಿತ್ಯ ಅನೇಕರು ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಇದರ ಮಧ್ಯೆ ಕೆಲವೊಂದು ರಾಜ್ಯಗಳಲ್ಲಿ ಲಾಕ್ಡೌನ್ ಘೋಷಣೆಯಾಗಿರುವ ಕಾರಣ ಕೂಲಿ ಕಾರ್ಮಿಕರು, ಬಡವರು ತೊಂದರೆ ಅನುಭವಿಸುವಂತಾಗಿದೆ. ಇದರ ಮಧ್ಯೆ ಕೇಂದ್ರ ಮಹತ್ವದ ಯೋಜನೆ ಘೋಷಣೆ ಮಾಡಿದೆ.
80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ: ಕೇಂದ್ರದ ಮಹತ್ವದ ಘೋಷಣೆ - ಕೇಂದ್ರ ಸರ್ಕಾರ
ದೇಶದಲ್ಲಿ ಡೆಡ್ಲಿ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಇದೀಗ ಬಡವರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಉಚಿತವಾಗಿ ಆಹಾರ ಧಾನ್ಯ ನೀಡುವುದಾಗಿ ಘೋಷಣೆ ಮಾಡಿದೆ.
food grains
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ತಿಂಗಳಿಂದ ಜೂನ್ 2021ರವರೆಗೆ 80 ಕೋಟಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದಾಗಿ ಘೋಷಣೆ ಮಾಡಿದೆ. ಈ ಯೋಜನೆಗೋಸ್ಕರ ಭಾರತ ಸರ್ಕಾರ 26,000 ಕೋಟಿ ರೂ.ಗಿಂತಲೂ ಅಧಿಕ ಹಣ ಖರ್ಚು ಮಾಡುತ್ತಿದೆ.
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೀಗಾಗಿ ಜನರು ಮನೆಯಿಂದ ಹೊರಬರಲು ತೊಂದರೆ ಅನುಭವಿಸುವಂತಾಗಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ಈ ಘೋಷಣೆ ಮಾಡಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಬಡ ವರ್ಗದವರಿಗೆ ಉಚಿತವಾಗಿ ಪಡಿತರ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಣೆ ಮಾಡಿದ್ದಾರೆ.