ಫಿರೋಜಾಬಾದ್ (ಉತ್ತರ ಪ್ರದೇಶ):ವೇಗವಾಗಿ ಬಂದ ಟ್ರಕ್‌ವೊಂದು ಬಸ್‌ಗೆ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗ್ಲಾ ಖಂಗರ್ ಪೊಲೀಸ್ ಠಾಣೆ ಸಮೀಪದಲ್ಲಿ ನಡೆದ ದುರ್ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಐವರ ಸಾವು, ಮೂವರಿಗೆ ಗಾಯ - ಫಿರೋಜಾಬಾದ್
ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.
ಆಗ್ರಾ-ಲಖನೌ ಎಕ್ಸ್‌ಪ್ರೇಸ್‌ವೇನಲ್ಲಿ ಭೀಕರ ಅಪಘಾತ; ಐವರ ದಾರುಣ ಸಾವು, ಮೂವರಿಗೆ ಗಾಯ
ರಾಜಸ್ಥಾನ ಮೂಲದ ಖಾಸಗಿ ಡಬಲ್ ಡೆಕ್ಕರ್ ಬಸ್ ಆಗ್ರಾದಿಂದ ಲಖನೌಗೆ ಹೋಗುತ್ತಿದ್ದಾಗ ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದಲ್ಲಿ ನಿಂತಿತ್ತು. ಬಸ್ ಚಾಲಕ ಹಾಗೂ ನಿರ್ವಾಹಕ ಬ್ರೇಕ್ ಸರಿಪಡಿಸುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ನೆರವಾಗುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Last Updated : Jun 29, 2021, 2:47 PM IST