ಮುಂಬೈ(ಮಹಾರಾಷ್ಟ್ರ): ಬಾಂದ್ರಾ ವರ್ಲಿ ಸೀಲಿಂಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮುಂಜಾನೆ 3.30ರ ಸುಮಾರಿಗೆ ಆಂಬ್ಯುಲೆನ್ಸ್ ಸೇರಿದಂತೆ ನಾಲ್ಕು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, 5 ಜನ ಸಾವನ್ನಪ್ಪಿದ್ದಾರೆ. ಘಟನೆಯಿಂದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ನಾಯರ್ ಮತ್ತು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮತ್ತು ಗಾಯಗೊಂಡವರ ವಿವರ ಇನ್ನೂ ಲಭ್ಯವಾಗಿಲ್ಲ.