ಛಿಂದ್ವಾರಾ(ಮಧ್ಯಪ್ರದೇಶ) :ಮಧ್ಯಪ್ರದೇಶದಲ್ಲಿ ಸಂಭವಿಸಿರುವ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮಹಾರಾಷ್ಟ್ರದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಐವರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿವೆ.
ಶಿವನ ದರ್ಶನ ಪಡೆದುಕೊಳ್ಳಲು ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಚೌರಗಢ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಜಿರಿಘಾಟ್ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿರುವ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ನಾಗ್ಪುರದ ವಾರ್ಧಾ ಜಿಲ್ಲೆಯವರು ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ:Watch : ಮೆಟ್ರೋ ನಿಲ್ದಾಣದ ಗ್ರಿಲ್ನಲ್ಲಿ ಸಿಲುಕಿಕೊಂಡ ಬಾಲಕಿಯ ರಕ್ಷಣೆ
ಮೃತರನ್ನ ತುಷಾರ್ ಕಾಂಬ್ಳೆ, ಅಕ್ಷಯ್ ಹಾಗೂ ದೀಪಕ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪ್ರದೀಪ್ನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ಕಂಠಪೂರ್ತಿ ಮದ್ಯಪಾನ ಮಾಡಿ ಕಾರು ಚಾಲನೆ ಮಾಡ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಂಟೈನರ್ಗೆ ಸ್ಕೂಟಿ ಡಿಕ್ಕಿ, ತಾಯಿ, ಮಗಳು ಸಾವು
ಸ್ಕೂಟಿಯಲ್ಲಿ ಸವಾರಿ ಮಾಡ್ತಿದ್ದ ವೇಳೆ ಕಂಟೈನರ್ಗೆ ಡಿಕ್ಕಿ ಹೊಡೆದಿರುವ ಪರಿಣಾಮ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಬೇತುಲ್ನಲ್ಲಿ ಈ ಅವಘಡ ಸಂಭವಿಸಿದೆ. ಮೃತರನ್ನ 22 ವರ್ಷದ ರೋಶನಿ ಹಾಗೂ ಆಕೆಯ ತಾಯಿ ನಿರ್ಮಲಾ ಎಂದು ಗುರುತಿಸಲಾಗಿದೆ.
ಸ್ಕೂಟರ್ ಅಪಘಾತದಲ್ಲಿ ತಾಯಿ-ಮಗಳು ದುರ್ಮರಣ ಮಗಳನ್ನ ಶಾಲೆಗೆ ಬಿಡುವ ಉದ್ದೇಶದಿಂದ ಸ್ಕೂಟರ್ ಮೇಲೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಂಟೈನರ್ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.