ಕರ್ನಾಟಕ

karnataka

ETV Bharat / bharat

ಹೊಲದಲ್ಲಿ ಕೆಲಸ ಮಾಡುವಾಗ ಅಪಘಾತ.. ನಾಲ್ವರು ಮಹಿಳೆಯರು ಸೇರಿ ಐವರ ಸಾವು - ಜಾರ್ಖಂಡ್​ನ ಗೊಡ್ಡಾ

ಗೊಡ್ಡಾ ಜಿಲ್ಲೆಯ ಪರಸಿ ಗ್ರಾಮದಲ್ಲಿ ಮೂವರು ಮಹಿಳೆಯರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ವೇಳೆ ಭಾರಿ ಮಳೆಯಾಗುತ್ತಿತ್ತು ಎಂದು ತಿಳಿದು ಬಂದಿದೆ.

thunderstorm in Godda
thunderstorm in Godda

By

Published : Aug 6, 2021, 8:07 PM IST

ಗೊಡ್ಡ(ಜಾರ್ಖಂಡ್​): ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ನಾಲ್ವರು ಮಹಿಳೆಯರು ಸೇರಿದಂತೆ ಐವರು ದುರ್ಮರಣಕ್ಕೀಡಾಗಿರುವ ಘಟನೆ ಜಾರ್ಖಂಡ್​ನ ಗೊಡ್ಡದಲ್ಲಿ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಗೊಡ್ಡಾ ಜಿಲ್ಲೆಯ ಪರಸಿ ಗ್ರಾಮದಲ್ಲಿ ಮೂವರು ಮಹಿಳೆಯರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂಧರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ವೇಳೆ ಭಾರಿ ಮಳೆಯಾಗುತ್ತಿತ್ತು ಎಂದು ತಿಳಿದು ಬಂದಿದೆ. ಸಿಡಿಲು ಬಡಿಯುತ್ತಿದ್ದಂತೆ ಮೂವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ, ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ಘೋಷಣೆ ಮಾಡಿದ್ದಾರೆ.

ಮತ್ತೊಂದು ಘಟನೆಯಲ್ಲಿ ಕಸ್ಬಾದ ಗ್ರಾಮದಲ್ಲಿ ಮಹಿಳೆಯೊಬ್ಬಳು ಸಿಡಿಲು ಬಡಿದು ಸಾವನ್ನಪ್ಪಿದ್ದು, ಮತ್ತೊಂದು ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗೊಡ್ಡಾದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಈ ಸಮಯದಲ್ಲಿ ಜನರು ಭತ್ತದ ಬಿತ್ತನೆ ಕಾರ್ಯದಲ್ಲಿ ಮಗ್ನರಾಗುತ್ತಿದ್ದಾರೆ. ಇದೇ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿರಿ:ಭೀಕರ ರಸ್ತೆ ಅಪಘಾತ.. ಐವರು ಸ್ಥಳದಲ್ಲೇ ದುರ್ಮರಣ.. ಹಿಮಾಚಲದಲ್ಲಿ ತಪ್ಪಿದ ಭಾರಿ ದುರಂತ

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗಡೆ ಹೋಗಿ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಹೊಲಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಳೆ ಬರುತ್ತಿದ್ದರೆ ಸುರಕ್ಷಿತ ಸ್ಥಳಗಳಲ್ಲಿ ನಿಂತುಕೊಳ್ಳಿ ಎಂದಿರುವ ಇಲಾಖೆ, ಮರದ ಕೆಳಗೆ ಆಶ್ರಯ ಪಡೆಯದಂತೆ ಮನವಿ ಮಾಡಿದೆ.

ABOUT THE AUTHOR

...view details