ಬಾರಾಬಂಕಿ(ಉತ್ತರಪ್ರದೇಶ):ವಿವಾಹಿತ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಳಿದ ನಾಲ್ವರಿಗಾಗಿ ಶೋಧ ಮುಂದುವರೆಸಿದ್ದಾರೆ.
ಬಡೋಸರೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು 5 ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಗ್ರಾಮದ ವ್ಯಕ್ತಿಯೊಬ್ಬ ಮಹಿಳೆಗೆ ಆಮಿಷವೊಡ್ಡಿ ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಮಾತನಾಡಲು ಆರಂಭಿಸಿದ್ದಾನೆ. ಸೆಪ್ಟೆಂಬರ್ 17ರಂದು ಮನೆಗೆ ಬಂದು ನಿನ್ನ ಪತಿ ಕರೆದುಕೊಂಡು ಬರುವಂತೆ ತಿಳಿಸಿದ್ದಾನೆಂದು ಹೇಳಿ ಊರಿನಿಂದ ಮಹಿಳೆಯನ್ನು ಹೊರಗೆ ಕರೆದೊಯ್ದಿದ್ದಾನೆ.