ಕರ್ನಾಟಕ

karnataka

ETV Bharat / bharat

ಭೀಕರ ರಸ್ತೆ ಅಪಘಾತ.. ನಾಲ್ವರು ಯುವತಿಯರು ಸೇರಿ ಐವರ ದುರ್ಮರಣ - Five people lost life

ಭೀಕರ ರಸ್ತೆ ಅಪಘಾತವೊಂದರಲ್ಲಿ ಐವರು ಸಾವನ್ನಪ್ಪಿದ್ದಾರೆ. ಗುಜರಾತ್​ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಿಬ್ಬಂದಿ ಎಂದು ತಿಳಿದು ಬಂದಿದೆ.

Bharuch accident
Bharuch accident

By

Published : May 12, 2021, 9:11 PM IST

ಭರೂಚ್​(ಗುಜರಾತ್​):ಪ್ರಯಾಣಿಕರ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಭರೂಚ್​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಎದುರಿನಿಂದ ವೇಗವಾಗಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ರಸ್ತೆಯಿಂದ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರನ್ನ ತಕ್ಷಣವೇ ಆ್ಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಾಲ್ವರು ಯುವತಿಯರು ಉಸಿರು ಚೆಲ್ಲಿದ್ದಾರೆ.

ಇದನ್ನೂ ಓದಿ: ರಂಜಾನ್ ವಿಶೇಷ ಪ್ರಾರ್ಥನೆಗಳನ್ನು ಮನೆಯಲ್ಲಿಯೇ ಮಾಡಿ; ಅಸಾದುದ್ದೀನ್ ಒವೈಸಿ ಕರೆ

ಘಟನೆ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಜತೆಗೆ ಅಪಘಾತಕ್ಕೆ ಕಾರಣವಾಗಿರುವ ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರೆಲ್ಲರೂ ಖಾಸಗಿ ಕಂಪನಿಯ ಸಿಬ್ಬಂದಿ ಆಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ABOUT THE AUTHOR

...view details