ಜುನಾಗಢ:ಇಂದು ಬೆಳ್ಳಂಬೆಳಗ್ಗೆ ಖಾಸಗಿ ಆಸ್ಪತ್ರೆಯೊಂದರ ಪಕ್ಕದ ಲ್ಯಾಬ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಯ ತುಂಬಾ ಹೊಗೆ ಆವರಿಸಿಕೊಂಡು ಐವರು ಅಸ್ವಸ್ಥರಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಹೌದು, ಖಾಸಗಿ ಆಸ್ಪತ್ರೆಯ ಬಳಿಯ ಲ್ಯಾಬ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆಸ್ಪತ್ರ ತುಂಬೆಲ್ಲ ಹೊಗೆ ಆವರಿಸಿಕೊಂಡಿದೆ. ಹೊಗೆ ಹಿನ್ನೆಲೆ ಮೂವರು ರೋಗಿಗಳು ಮತ್ತು ಇಬ್ಬರು ವ್ಯಕ್ತಿಗಳು ಸೇರಿ ಐವರಿಗೆ ಉಸಿರಾಟದ ತೊಂದರೆಯಾಗಿದೆ. ಕೂಡಲೇ ಅವರನ್ನೆಲ್ಲ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ