ಕರ್ನಾಟಕ

karnataka

ETV Bharat / bharat

ಕಾಕಿನಾಡ ಕೇಂದ್ರೀಯ ವಿದ್ಯಾಲಯದಲ್ಲಿ 50 ವಿದ್ಯಾರ್ಥಿಗಳು ಅಸ್ವಸ್ಥ

ಕಾಕಿನಾಡ ಕೇಂದ್ರೀಯ ವಿದ್ಯಾಲಯದಲ್ಲಿ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಘಟನೆಗೆ ಕಾರಣವೇನೆಂದು ತಿಳಿಯುತ್ತಿಲ್ಲ. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಪಾಲಕರು ದೂರಿದ್ದಾರೆ.

50 students fell sick in Kakinada Kendriya Vidyalaya
ಕಾಕಿನಾಡ ಕೇಂದ್ರೀಯ ವಿದ್ಯಾಲಯದಲ್ಲಿ 50 ವಿದ್ಯಾರ್ಥಿಗಳು ಅಸ್ವಸ್ಥ

By

Published : Sep 6, 2022, 9:14 PM IST

ಹೈದರಾಬಾದ್: ಕಾಕಿನಾಡ ಕೇಂದ್ರೀಯ ವಿದ್ಯಾಲಯದಲ್ಲಿ ಇಂದು ಬೆಳಗ್ಗೆ ಸುಮಾರು 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದರು. ವಿಷಕಾರಿ ಅನಿಲ ಸೇವನೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.

ಕೂಡಲೇ ಶಾಲಾ ಸಿಬ್ಬಂದಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಶಾಲೆಗೆ ಧಾವಿಸಿದ ಪೋಷಕರು ಮಕ್ಕಳು ಕೆಳಗೆ ಬಿದ್ದಿರುವುದನ್ನು ಕಂಡು ಆತಂಕಗೊಂಡರು. ಬಳಿಕ ಅಸ್ವಸ್ಥ ವಿದ್ಯಾರ್ಥಿಗಳನ್ನು ಕೂಡಲೇ ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಗೆ ಕಾರಣವೇನೆಂದು ತಿಳಿಯುತ್ತಿಲ್ಲ. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಪಾಲಕರು ದೂರಿದ್ದಾರೆ.

ವಿಷಾನಿಲ ಸೇವನೆಯಿಂದ ವಿದ್ಯಾರ್ಥಿಗಳು ಉಸಿರಾಡಲು ತೊಂದರೆಯಾಗಿದೆ ಎಂದು ಜಿಜಿಹೆಚ್ ಅಧೀಕ್ಷಕ ಬುದ್ಧ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರೀಯ ವಿದ್ಯಾಲಯದಲ್ಲಿ ನಿನ್ನೆ ವಿದ್ಯಾರ್ಥಿನಿಯೊಬ್ಬಳ ಹುಟ್ಟುಹಬ್ಬ ಆಚರಿಸಲಾಗಿತ್ತು. ಸಂಭ್ರಮಾಚರಣೆಯಲ್ಲಿ ರಾಸಾಯನಿಕ ಕೆಲವು ಸ್ಪ್ರೇಗಳನ್ನು ಬಳಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಕ್ರೀಡಾಂಗಣದಲ್ಲಿ ಸೇನಾ ಆಕಾಂಕ್ಷಿಗಳ ನಡುವೆ ಹೊಡೆದಾಟ, ಗುಂಡಿನ ದಾಳಿ ಶಂಕೆ: ವಿಡಿಯೋ ವೈರಲ್​

ABOUT THE AUTHOR

...view details